Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Aadhaar For Child: ಹೊಸದಾಗಿ ಹುಟ್ಟಿದ ಮಗುವಿಗೆ ಈ ಗುರುತಿನ ಚೀಟಿ ಮಾಡಿಸಲೇಬೇಕು! ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್ ಜಾರಿ!

Aadhaar card update for new-born babies.

Aadhaar For Child: ಭಾರತ ದೇಶದಲ್ಲಿ ಇದೀಗ ಕೇಂದ್ರ ಸರ್ಕಾರದ Central Government ಆದೇಶದಂತೆ ಎಲ್ಲಾ ದಾಖಲೆಗಳ ರೀತಿಯೆ ಇದೀಗ ಆಧಾರ್ ಕಾರ್ಡ್ ಬಹು ಮುಖ್ಯವಾದ ದಾಖಲೆಯಾಗಿದೆ. ನೀವು ಭಾರತೀಯರಾಗಿದ್ದರೆ, ನೀವು ಕಡ್ಡಾಯವಾಗಿ ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು. ನೀವು ಭಾರತೀಯರು ಎಂದು ನಿರೂಪಿಸುವುದಕ್ಕೆ ಆಧಾರ್ ಕಾರ್ಡ್ ಬಹಳ ಮುಖ್ಯ.

ಇನ್ನು ನೀವು ಯಾವುದೇ ಸರ್ಕಾರಿ ಕಚೇರಿಗಳಿಗೆ ಹೋದರೂ ಅಥವಾ ಯಾವುದೇ ಕೆಲಸ ಮಾಡಲು ಮುಂದಾದರೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಇಲ್ಲದೆ ಹೋದರೆ, ನಿಮ್ಮ ಯಾವುದೇ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುವುದಿಲ್ಲ.

ಇನ್ನು ಇತ್ತೀಚೆಗೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಬಹು ಮುಖ್ಯ ಸ್ಥಾನ ನೀಡಲು ಮುಂದಾಗಿದೆ. ನಿಮ್ಮ ಆಧಾರ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಲು ಬಯಸಿದ್ದರೆ ನೀವು ನಿಮ್ಮ ಹತ್ತಿರದ ಆಧಾರ್ ಸೆಂಟರ್ ಗೆ ಭೇಟಿ ನೀಡುವ ಮೂಲಕ ಅದನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು. ಹೌದು, ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ತಿದ್ದುಪಡಿಯನ್ನು ಉಚಿತವಾಗಿ ಇರಿಸಲಾಗಿದೆ.

ಅಲ್ಲದೆ ಇತ್ತೀಚೆಗೆ ನಿಮ್ಮ ಎಲ್ಲಾ ಸರ್ಕಾರಿ ದಾಖಲೆಗಳನ್ನು ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಮಾಡಿಸುವಂತೆ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿತು. ಇನ್ನು ಆಧಾರ್ ಕಾರ್ಡ್ ಜೊತೆಗೆ ನಿಮ್ಮ ಎಲ್ಲಾ ದಾಖಲೆಗಳನ್ನು ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಸಹ ತಿಳಿಸಲಾಗಿತ್ತು.

ಅದರಂತೆ ಅನೇಕರು ತಮ್ಮ ಹತ್ತಿರದ ಬೆಂಗಳೂರು ಒನ್, ಆಧಾರ್ ಸೆಂಟರ್ ಗಳಿಗೆ ಭೇಟಿ ನೀಡಿ ತಮ್ಮ ಆಧಾರ್ ಕಾರ್ಡ್ ಅನ್ನು ತಮ್ಮ ಪ್ಯಾನ್ ಕಾರ್ಡ್, ಬ್ಯಾಂಕ್ ಅಕೌಂಟ್ ಹೀಗೆ ಇನ್ನಿತರ ದಾಖಲೆಗಳ ಜೊತೆಗೆ ಲಿಂಕ್ ಮಾಡಿಸಿದ್ದಾರೆ.

ಇನ್ನು ಇತ್ತೀಚೆಗೆ ಆಧಾರ್ ಕಾರ್ಡ್ ಕುರಿತಂತೆ ಹಲವಾರು ಹೊಸ ಅಪ್ಡೇಟ್ ಗಳು ಹೊರ ಬೀಳುತ್ತಿದೆ. ಇನ್ನು ಇದೀಗ ಆಧಾರ್ ಕಾರ್ಡ್ ಕುರಿತಂತೆ ಕೇಂದ್ರ ಸರ್ಕಾರ ಮತ್ತೊಂದು ಮಾಹಿತಿಯನ್ನು ಹಂಚಿಕೊಂಡಿದೆ. ಹಾಗಾದರೆ ಏನಿದು ಸುದ್ದಿ ನೋಡೋಣ ಬನ್ನಿ…

Aadhaar card update for new-born babies.
Image Credit: Original source.

ಮಕ್ಕಳಿಗೆ ಆಧಾರ್ ಕಾರ್ಡ್ ಕಡ್ಡಾಯ.

ಭಾರತದಲ್ಲಿ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಬಹಳ ಮುಖ್ಯ ಎನ್ನುವ ವಿಚಾರ ನಿಮ್ಮೆಲ್ಲರಿಗೂ ಗೊತ್ತೇ ಇದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಆಧಾರ್ ಕಾರ್ಡ್ ಕುರಿತಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇನ್ನು ಇತ್ತೀಚೆಗೆ ಶಾಲಾ ಶಿಕ್ಷಣದ ರೀತಿಯಲ್ಲಿ ಸಹ ಬದಲಾವಣೆಗಳನ್ನು ಮಾಡಿರುವುದು ನಿಮ್ಮೆಲ್ಲರಿಗೂ ಗೊತ್ತೇ ಇದೆ.

ಹೌದು, ಮಗುವಿನ ವಯಸ್ಸು 6 ವರ್ಷ ತುಂಬಿದರೆ ಮಾತ್ರ ಅವರನ್ನು ಒಂದನೇ ತರಗತಿಗೆ ದಾಖಲು ಮಾಡಬಹುದು ಶಿಕ್ಷಣ ಇಲಾಖೆ ಮಾಹಿತಿ ನೀಡಿತು. ಇನ್ನು ಇದೀಗ ಮಗುವಿನ ಶಾಲೆಗೆ ಸೇರಿಸಲು ಸಹ ಆಧಾರ್ ಕಾರ್ಡ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಮಾಹಿತಿ ಹೊರಡಿಸಿದೆ. ಹೌದು, ಮಗುವಿನ ಆಧಾರ್ ಕಾರ್ಡ್ ಇದ್ದರೆ ಮಾತ್ರ ಶಾಲೆಗೆ ಸೇರಿಸಲು ಸಾಧ್ಯ ಎನ್ನಲಾಗುತ್ತಿದೆ.

ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲು ಬೇಕಾದ ದಾಖಲಾತಿಗಳು.

ಮಗುವಿಗೆ 5 ವರ್ಷ ತುಂಬಿದ ನಂತರ child Aadhaar card ಮಾಡಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮಾಹಿತಿ ಹೊರಡಿಸಿದೆ. ನಿಮ್ಮ ಹತ್ತಿರದ ಸರ್ಕಾರಿ ಕಚೇರಿಗೆ ಭೇಟಿ ನೀಡಿ, ಮಗುವಿನ ಪಾಸ್ ಪೋರ್ಟ್ ಸೈಜ್ ಫೋಟೋ, ಜನನ ಪ್ರಮಾಣ ಪತ್ರ, ಪೋಷಕರ ಆಧಾರ್ ಕಾರ್ಡ್ ಜೊತೆಗೆ ಅವರ ಎರಡು ಪಾಸ್ ಪೋರ್ಟ್ ಸೈಜ್ ಫೋಟೋ ನೀಡುವ ಮೂಲಕ ನೀವು ನಿಮ್ಮ ಮಗುವಿನ ಆಧಾರ್ ಕಾರ್ಡ್ ಅನ್ನು ಮಾಡಿಸಬಹುದು. Aadhaar Card Wiki

Leave a comment