Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

Government Prize Money : ಸರ್ಕಾರದಿಂದ ಸಿಗಲಿದೆ 35,000 ರೂಪಾಯಿ ಬಹುಮಾನ! ಯಾರಿಗೆ? ಹೇಗೆ ಪಡೆಯೋದು?

Government Prize Money : ಕರ್ನಾಟಕ ಸರ್ಕಾರವು ನೀಡುವ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಾಯಕವಾಗಿದೆ. ರಾಜ್ಯದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Government Prize Money : ಕರ್ನಾಟಕ ಸರ್ಕಾರವು ನೀಡುವ ವಿದ್ಯಾರ್ಥಿವೇತನವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಸಹಾಯಕವಾಗಿದೆ. ರಾಜ್ಯದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕರ್ನಾಟಕ ಸರ್ಕಾರವು ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆಯ ಮೂಲಕ 2023 ನೇ ಸಾಲಿನ ಬಹುಮಾನ ಮೊತ್ತದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಕರ್ನಾಟಕದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಲಭ್ಯವಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರೈಜ್ ಮನಿ ಸ್ಕಾಲರ್‌ಶಿಪ್ 2024 ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯು ರಾಜ್ಯದ ಎಲ್ಲಾ SC ಮತ್ತು ST ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ಉದ್ದೇಶವನ್ನು ಹೊಂದಿದೆ. ಈ ಯೋಜನೆಯಡಿ, ಅರ್ಹ ಅಭ್ಯರ್ಥಿಗಳಿಗೆ ₹35,000/- ವಿದ್ಯಾರ್ಥಿವೇತನ ನೀಡಲಾಗುತ್ತದೆ. ಹಾಗಾದರೆ ಇದಕ್ಕೆ ಬೇಕಾಗುವ ಅರ್ಹತೆಗಳೇನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಎನ್ನುವಂತಹ ಮಾಹಿತಿಗಳನ್ನು ನಿಮಗೆ ತಿಳಿಸಿಕೊಡುತ್ತೇವೆ.

Government Prize Money

ಇರಬೇಕಾದ ಅರ್ಹತೆಗಳು:

*ಕರ್ನಾಟಕ ರಾಜ್ಯದ SC ಮತ್ತು ST ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
*2023-24ನೇ ಶೈಕ್ಷಣಿಕ ವರ್ಷದಲ್ಲಿ 10+2 ಪರೀಕ್ಷೆಯಲ್ಲಿ 60% ಕ್ಕಿಂತ ಕಡಿಮೆ ಅಂಕಗಳನ್ನು ಪಡೆದಿರಬಾರದು.
*ಯಾವುದೇ ವೃತ್ತಿಪರ ಅಥವಾ ತಾಂತ್ರಿಕ ಕೋರ್ಸ್‌ಗಳಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿರಬೇಕು
*ವಾರ್ಷಿಕ ಆದಾಯ ₹2.5 ಲಕ್ಷಕ್ಕಿಂತ ಮೀರಬಾರದು.

Also Read: Grama Panchayiti Recruitment : ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಯಲ್ಲಿ ಸೂಪರ್ವೈಸರ್ ಹುದ್ದೆಗಳ ನೇಮಕಾತಿ! ಆಸಕ್ತರು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ:

*ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://sw.kar.nic.in/
*’Scholarship’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
*’Prize Money Scholarship’ ಆಯ್ಕೆಮಾಡಿ
*ಅಗತ್ಯವಿರುವ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

Government Prize Money for SC ST Students
Government Prize Money for SC ST Students

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

* 29 ಫೆಬ್ರುವರಿ 2024 ಆಗಿದೆ.

ಆಯ್ಕೆ ಪ್ರಕ್ರಿಯೆಯನ್ನು ನೋಡೋಣ:

ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸರ್ಕಾರವು ಒಂದು ಸಮಿತಿಯನ್ನು ರಚಿಸಲಿದೆ. ಈ ಸಮಿತಿಯು ಅರ್ಜಿದಾರರ ಶೈಕ್ಷಣಿಕ ಅರ್ಹತೆ, ಆದಾಯ ಮತ್ತು ಇತರ ಅಂಶಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ ವೆಬ್‌ಸೈಟ್: https://sw.kar.nic.in/ ಈ ವಿಳಾಸಕ್ಕೆ ಭೇಟಿ ನೀಡಿ.
*ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ: 1800-425-5225 ಈ ನಂಬರಿಗೆ ಕರೆ ಮಾಡಿ.

ಪ್ರೈಜ್ ಮನಿ ಸ್ಕಾಲರ್‌ಶಿಪ್ 2024 ಯೋಜನೆಯು ಕರ್ನಾಟಕದ SC ಮತ್ತು ST ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶವಾಗಿದೆ. ಈ ಯೋಜನೆಯ ಲಾಭ ಪಡೆಯಲು ಅರ್ಹ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸಬೇಕು. ಈ ಲೇಖನದಲ್ಲಿ ಎಲ್ಲ ರೀತಿಯ ಮಾಹಿತಿಗಳನ್ನು ಕೂಡ ನಿಮಗೆ ಒದಗಿಸಲಾಗಿದೆ ಈ ಮಾಹಿತಿಗಳನ್ನು ಸದುಪಯೋಗಪಡಿಸಿಕೊಂಡು ಅರ್ಹ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಿ.

ಓದುಗರ ಗಮನಕ್ಕೆ: ಹಿಂದೂಸ್ತಾನ್ ಪ್ರೈಮ್ ಯಾವುದೇ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳನ್ನು ಬಿತ್ತರಿಸುವುದಿಲ್ಲ, ನಿಖರವಾದ ಮತ್ತು ಅಧಿಕೃತವಾದ ಮಾಹಿತಿ ಹಾಗು ಸುದ್ಧಿಗಳನ್ನು ಮಾತ್ರ ಪ್ರಕಟಿಸುತ್ತದೆ, ಓದುಗರ ಸಂತೋಷವೇ ನಮ್ಮ ಸಂತೋಷ.

Also Read: Job News : ನಿಮ್ಮ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ತುಂಬಿಸುವ ಕೆಲಸಗಳು! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Leave a comment