Hindustan Prime
Hindustan Prime is a 24-hour media news website, we provide you with the Latest Breaking news, Current affairs, Technology, Automobiles and Karnataka news.

P C Mohan: ಬಿಜೆಪಿ ಸಂಸದ ಪಿ.ಸಿ.ಮೋಹನ್ ತಮ್ಮ 4ನೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ, ಅವರ ಗೆಲುವು ಹೀಗೆ ಮುಂದುವರೆಯಲಿ ಎಂದು ಆಶಿಸೋಣ.

ಬೆಂಗಳೂರು ನಗರದ ಅಭಿವೃದ್ಧಿಗೆ ಅವರು ಶ್ರಮಿಸಿದ ಬಗ್ಗೆಯೂ ಮಾತನಾಡಿರುವ ಅವರು, ಕಳೆದ 15 ವರ್ಷಗಳಿಂದ ಬೆಂಗಳೂರಿನ ಮೂಲಸೌಕರ್ಯಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ.

P C Mohan: ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಿಂದ ಮೂರು ಬಾರಿ ಹ್ಯಾಟ್ರಿಕ್ ಗೆಲುವ ಸಾಧಿಸಿರುವ ಬಿಜೆಪಿ ಸಂಸದ ಪಿ.ಸಿ.ಮೋಹನ್ ತಮ್ಮ 4ನೇ ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಅವರು ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

IMG 20240417 WA0005

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವನ್ನು ಶ್ಲಾಘಿಸಿದ ಪಿ.ಸಿ.ಮೋಹನ್. ‘‘ಪ್ರಧಾನಿ ಮೋದಿ ಅವರ ರೋಡ್‌ ಶೋ ಹಾಗೂ ಜೆಡಿಎಸ್ ಪಕ್ಷದ ಬೆಂಬಲದೊಂದಿಗೆ ಕರ್ನಾಟಕದ 28 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶದ ಆರ್ಥಿಕತೆಯು ದೃಢವಾದ ಬೆಳವಣಿಗೆಯನ್ನು ಕಂಡಿದೆ. ಮೆಟ್ರೊ ಸೇವೆಗಳು, ನಿರ್ಗತಿಕರಿಗೆ ವಸತಿ, ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ಮತ್ತು ಇತರ ಹಲವಾರು ಯೋಜನೆಗಳಂತಹ ಉಪಕ್ರಮಗಳ ಮೂಲಕ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅಪಾರವಾದ ಕೊಡುಗೆ ನೀಡಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷ ಬೆಂಗಳೂರು ಮಾತ್ರವಲ್ಲದೆ ದೇಶದಾದ್ಯಂತ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ’’ ಎಂದರು.

IMG 20240417 WA0006

ಬೆಂಗಳೂರು ನಗರದ ಅಭಿವೃದ್ಧಿಗೆ ಅವರು ಶ್ರಮಿಸಿದ ಬಗ್ಗೆಯೂ ಮಾತನಾಡಿರುವ ಅವರು, ಕಳೆದ 15 ವರ್ಷಗಳಿಂದ ಬೆಂಗಳೂರಿನ ಮೂಲಸೌಕರ್ಯಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದೇನೆ. ಮೆಟ್ರೊ ರೈಲು ಮತ್ತು ಸಬ್ ಅರ್ಬನ್ ರೈಲಿನಂತಹ ಯೋಜನೆಗಳು ಹಾಗೂ ರೈಲ್ವೆ ನಿಲ್ದಾಣಗಳು ಮತ್ತು ಹೆದ್ದಾರಿಗಳಲ್ಲಿ ಉತ್ತಮ ಸೌಕರ್ಯಗಳು, ನಗರಕ್ಕೆ ಎಲೆಕ್ಟ್ರಿಕ್ ಬಸ್‌ಗಳು ಸ್ಕೈವಾಕ್ಗಳು, ಫ್ಲೈ ಓವರ್‌ಗಳಂತಹ ಯೋಜನೆಗಳಿಂದ ನಗರದ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು, ಬೆಂಗಳೂರನ್ನು ವಿಶ್ವದರ್ಜೆಯ ಸೌಕರ್ಯಗಳನ್ನು ಒದಗಿಸಲು ದಣಿವರಿಯದೆ ಶ್ರಮ ಪಟ್ಟಿದ್ದೇನೆ ಎಂದರು.

IMG 20240417 WA0003

ಇದರ ಜೊತೆಗೆ ಜನರಿಗೆ ಸುಲಭವಾಗಿ ಸಿಗುವ ರಾಜಕಾರಣಿ ನಾನಾಗಿದ್ದು, ಯಾವುದೇ ಸಮಯದಲ್ಲಿ ಜನ ಕರೆ ಮಾಡಿದರೂ ನಾನೆ ಖುದ್ದು ಸ್ವೀಕರಿಸಿ ಅವರ ಸಮಸ್ಯೆ ಬಗೆಹರಿಸುತ್ತೇನೆ, ನಮ್ಮ ಕ್ಷೇತ್ರದಲ್ಲಿ ವಿವಿಧ ವರ್ಗದ ಜನರಿದ್ದು ಅವರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ರಾಜಕೀಯ ಆದ್ಯತೆಗಳನ್ನೂ ಲೆಕ್ಕಿಸದೆ ಅವರ ಅಗತ್ಯದ ಸಮಯದಲ್ಲಿ ನಾನಿದ್ದೇನೆ ಎಂದು ಹೇಳಿದರು.

IMG 20240417 WA0004

ಮರು ಆಯ್ಕೆಯಾದರೆ ಜನರಿಗೆ ನೀವು ನೀಡುವ ಭರವಸೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿ ಮತ್ತು ಎನ್‌ಡಿಎ ಸರ್ಕಾರ ಪ್ರತಿಯೊಂದು ಕಾರ್ಯಕ್ರಮಗಳು ಮತ್ತು ಉಪಕ್ರಮಗಳು ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹಾಗೂ ಆರ್‌ಡಬ್ಲೂಎ ಮಟ್ಟದಲ್ಲಿ ಉತ್ತಮ ಆಡಳಿತವನ್ನು ಸುಗಮಗೊಳಿಸುವುದು, ನಗರ ಭೂದೃಶ್ಯಗಳನ್ನು ಹೆಚ್ಚಿಸುವ ಮತ್ತು ಜೀವನ ಶಾಂತಿಯನ್ನು ಖಾತ್ರಿಪಡಿಸುವ ನೀತಿಯನ್ನು ಜಾರಿಗೆ ತರುವುದು, ಕೇಂದ್ರ ಸರ್ಕಾರದ ಯೋಜನೆಗಳು ಜನರ ಹಿತದೃಷ್ಟಿಗಾಗಿ ತಂದಿದ್ದು ಅದನ್ನು ಅನುಷ್ಠಾನಗೊಳಿಸಿ, ಜನರಿಗೆ ಪೂರ್ಣ ಪ್ರಮಾಣದಲ್ಲಿ ತಲುಪಿಸುವ ಉದ್ದೇಶವಿದೆ ಎಂದರು.

IMG 20240417 WA0002

ಅಷ್ಟೇ ಅಲ್ಲದೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರಿಗೆ ಮೂಲಸೌಕರ್ಯವನ್ನು ಹೆಚ್ಚಿಸುವುದು ನನ್ನ ಗುರಿ ಮತ್ತು ಮೊದಲ ಆದ್ಯತೆ ಎಂದು ಭರವಸೆಯ ಮಾತುಗಳನ್ನಾಡಿದರು.

IMG 20240417 WA0007

ಅಂದಹಾಗೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್ ಎದುರು ಕಾಂಗ್ರೆಸ್ ಮನ್ಸೂರ್ ಆಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದು, ಮೇಲ್ನೋಟಕ್ಕೆ ಇದು ನಾಮಕಾವಸ್ಥೆಯ ಪ್ರಯತ್ನ ಎಂಬಂತೆ ಕಾಣುತ್ತಿದೆ.

IMG 20240417 WA0008

ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡನೇ ಮತ್ತು ಮೂರನೇ ಹಂತದ ಮತದಾನ ನಡೆಯಲಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್ 1, ಜೆಡಿಎಸ್ 1, ಪಕ್ಷೇತರ 1 ಗೆದ್ದಿತ್ತು. ಆದರೆ ಈ ಬಾರಿಯ ಚುನಾವಣೆಯ ಲೆಕ್ಕಾಚಾರಗಳು ಏನಾಗಬಹುದು ಎಂಬ ಕುತೂಹಲ ಇದೆ.

IMG 20240417 WA0009

Leave a comment