ಕರ್ನಾಟಕ ರಾಜ್ಯದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ದಕ್ಷಿಣ ಭಾಗದಲ್ಲಿ ದಟ್ಟವಾದ ಅರಣ್ಯದ ನಡುವೆ ಕಾವೇರಿ ನದೀ ಪಾತ್ರದಲ್ಲಿರುವ ಒಂದು ಪ್ರೇಕ್ಷಣೀಯ ವಿಹಾರಸ್ಥಳ, ಬೆಂಗಳೂರಿನಿಂದ ೯೦ ಕಿ. ಮೀ. ದೂರದಲ್ಲಿದೆ. ಬೆಂಗಳೂರಿನ ದಕ್ಷಿಣಕ್ಕೆ ಸಾತನೂರು ಮಾರ್ಗವಾಗಿ 113 ಕಿಮೀ. ಕನಕಪುರದಿಂದ ಸಾತನೂರು, ಆಲಹಳ್ಳಿ, ಉಯ್ಯಂಬಳ್ಳಿಗಳ ಮಾರ್ಗವಾಗಿ ದಕ್ಷಿಣದಲ್ಲಿ ಸುಮಾರು 40 ಕಿಮೀ ದೂರದಲ್ಲಿದೆ. ಕನ್ನಡ ಭಾಷೆಯಲ್ಲಿ ಅದರ ಅರ್ಥ ಮೇಕೆ ಹಾರುವಷ್ಟು ಸ್ಥಳ. ಇಲ್ಲಿ ಕಾವೇರಿನದಿ, ಆಳವಾದ ಕಂದರಕ್ಕೆ ಧುಮುಕುತ್ತದೆ. ಅದರ ಅಗಲ ಅಷ್ಟೇನು ಹೆಚ್ಚಾಗಿಲ್ಲ. ಕೇವಲ ಮೇಕೆ ಹಾರಿದಾಟುವಷ್ಟು ಜಾಗಮಾತ್ರ.
ಕಾವೇರಿ-ಅರ್ಕಾವತಿ ನದಿಯ ಸಂಗಮದ ಹತ್ತಿರದ ವರೆಗೆ ಕಾರ್-ಡ್ರೈವ್ ಮಾಡಿಹೋಗಬಹುದು. ಇದರ ನಂತರ, ನದಿಯನ್ನು ‘ತೆಪ್ಪ,’ ದಲ್ಲಿ ದಾಟಬಹುದು. ನೀರು ಆಳವಿಲ್ಲದಿದ್ದರೆ ನಡೆದೇ ಹೋಗಬಹುದು. ಇಲ್ಲಿಂದ ಮೇಕೆದಾಟು ೪ ಕಿ. ಮೀ ದೂರವಿದೆ. ಮೇಕೆದಾಟು ನ ವರೆಗೆ, ಹೋಗಲು ಕೇವಲ ೧ ಬಸ್ ಇದೆ. ‘ಮಾನ್ಸೂನ್,’ ಸಮಯದಲ್ಲಿ ಅಲ್ಲಿನ ಬಂಡೆಗಳಮೇಲೆ ಹತ್ತಲು ಬಹಳ ಕಷ್ಟ. ಜಾರುತ್ತವೆ. ಮತ್ತೊಂದು ಫಾಲ್ಸ್ ‘ಚುಂಚಿ ಜಲಪಾತ,’ ಹತ್ತಿರದಲ್ಲಿದೆ. ಸಂಗಮದ ಹತ್ತಿರದಿಂದ ಸ್ವಲ್ಪ ಬೇರೆದಿಕ್ಕಿಗೆ, ಹೋಗಬೇಕು.
ಮೇಕೆದಾಟು ಯೋಜನೆ ಜಾರಿಗಾಗಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಅನುಮತಿ ಬೇಕು ಅಂತ ನೀರಾವರಿ ಇಲಾಖೆ ಹೇಳ್ತಾ ಇದೆ. ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂಬುದಾಗಿ ಸಂಸತ್ ನಲ್ಲೇ ಸರ್ಕಾರ ತಿಳಿಸಿದೆ. ನಾನು ಸಿಎಂ ಆಗಿದ್ದಾಗ ಡಿಪಿಎಆರ್ ರೆಡಿ ಮಾಡಿಕೊಡಿ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿತ್ತು. ಈಗ ನೋಡಿದ್ರೇ ಅನುಮತಿ ನೀಡಬೇಕು ಎಂಬುದಾಗಿ ಹೇಳುತ್ತಿದೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತಂತೆ ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ. ಪ್ರಜ್ವಲ್ ರೇವಣ್ಣ ಕೂಡ ಸಂಸತ್ ನಲ್ಲಿ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರ ನಾವು ಒಪ್ಪಿಗೆ ಸೂಚಿಸಿಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂಬುದಾಗಿಯೂ ಹೇಳುತ್ತಿದೆ. ಸಿಎಂ ನಾನು ಮೇಕೆದಾಟು ಯೋಜನೆ ಜಾರಿಗೆ ಶತಸಿದ್ಧ ಎಂಬುದಾಗಿ ಹೇಳುತ್ತಿದ್ದಾರೆ ನೋಡೋಣ ಜಾರಿ ಮಾಡ್ತಾರಾ ಎಂಬುದಾಗಿ ಹೇಳಿದರು.
ಕರ್ನಾಟಕವನ್ನು ಕೇಂದ್ರ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾನು ಸಿಎಂ ಆಗಿದ್ದಾಗ ಜಲಸಂಪನ್ಮೂಲ ಸಚಿವರು ಡಿಪಿಎಆರ್ ರೆಡಿ ಮಾಡಿಕೊಡಿ ಅಂದಿದ್ದರು. ಈಗ ನಾವು ಯಾವುದನ್ನು ಲೆಕ್ಕಕ್ಕೆ ತಗೊಳ್ಳೋದಿಲ್ಲ ಅಂತಿದ್ದಾರೆ. ಕೇಂದ್ರದ ಧೋರಣೆಯ ಬಗ್ಗೆ ಕರ್ನಾಟಕದ ಜನರು ಒಂದು ನಿರ್ಧಾರಕ್ಕೆ ಬರಬೇಕು ಎಂದರು.