ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ನಾನು ಪಕ್ಷ ಸಂಘಟನೆ ಮಾಡಬೇಕು. ಇಡೀ ರಾಜ್ಯ ಸುತ್ತಬೇಕಿದೆ. ವಿಶೇಷವಾಗಿ ಹಳೇ ಮೈಸೂರು ಭಾಗದಲ್ಲಿ ಸುತ್ತಬೇಕು. ಅದನ್ನು ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಗುರುತಿಸಿರುವುದು ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರ. ನನಗೆ ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು. ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ ಎಂದರು.
ಇನ್ನು ಹಾನಗಲ್ನಲ್ಲಿ ಸ್ಪರ್ಧೆ ಮಾಡುವ ವಿಚಾರದ ಬಗ್ಗೆ ಪ್ರಶ್ನಿಸಿದಕ್ಕೆ ಉತ್ತರಿಸಿದ ಅವರು ಹಾನಗಲ್‌ನಲ್ಲಿ ಸ್ಪರ್ಧೆ ಪಕ್ಷಕ್ಕೆ ಬಿಟ್ಟಿದ್ದು ಎಂದರು. ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಯಾವುದೇ ನೋವಿಲ್ಲ.
ನನಗೆ ಸಚಿವ ಸ್ಥಾನ ಕೊಡಬೇಕೆಂದು ಬಿ.ಎಸ್. ಯಡಿಯೂರಪ್ಪ ಒತ್ತಡ ಹೇರಿಲ್ಲ. ಯಡಿಯೂರಪ್ಪ ಕಂಡೀಷನ್ ಇಟ್ಟಿದ್ರು ಅನ್ನೋದು ಸುಳ್ಳು ಎಂದರು. ಇನ್ನೂ ನನಗೆ ಡಿಸಿಎಂ ಕೊಡಬೇಕೆಂದು ಅಂತ ಅವರು ಕಂಡಿಷನ್ ಇಟ್ಟಿಲ್ಲ. ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲವೆಂದು ಅಸಮಾಧಾನವಿಲ್ಲ. ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಅವಕಾಶ ಕೊಟ್ಟಿದೆ. ವರುಣಾ ಕ್ಷೇತ್ರದ ಮೇಲೆ ಹೆಚ್ಚು ಪ್ರೀತಿ ಇದೆ ಎಂದರು.ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಬಿ.ವೈ. ವಿಜಯೇಂದ್ರ ಅವರು ಹಿಂಬಾಗಿಲಿನ ಮೂಲಕ ರಾಜಕೀಯ ಪ್ರವೇಶ ನಿರಾಕರಿಸಿದ್ದಾರೆ ಎಂಬ ಮಾತಿದೆ.
ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಬೇಡ ಎಂಬ ಸಲಹೆಯನ್ನೂ ಮಾಜಿ ಸಿಎಂ ಯಡಿಯೂರಪ್ಪ ಅವರು ಪುತ್ರನಿಗೆ ಕೊಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿರುವ ಬಿ.ವೈ. ವಿಜಯೇಂದ್ರ ಅವರು ಈ ಎಲ್ಲದಕ್ಕೂ ಪ್ರತಿಕ್ರಿಯೆ ಕೊಟ್ಟಿದ್ದಾರೆ.ಬಿ.ವೈ. ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧೆ ಮಾಡಲು ಬಯಸಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, “ನಾನು ಪಕ್ಷದ ಉಪಾಧ್ಯಕ್ಷನಾಗಿ ಇಡೀ ರಾಜ್ಯ ಸುತ್ತಬೇಕಿದೆ.
ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಸುತ್ತಬೇಕು. ಅದನ್ನು ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ. ಜೊತೆಗೆ ನನ್ನನ್ನು ಗುರಿತಿಸಿರುವ ಕ್ಷೇತ್ರ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ. ಹೀಗಾಗಿ ನಾನು ಅಲ್ಲಿಗೆ ಹೆಚ್ಚು ಒತ್ತು ಕೊಡುತ್ತೇನೆ. ಆದರೆ ಟಿಕೆಟ್ ಕೊಡುವುದು, ಬ ಬಿಡುವುದು ಪಕ್ಷದ ವರಿಸ್ಠರಿಗೆ ಬಿಟ್ಟಿದ್ದು” ಎಂದು ವಿಯಯೇಂದ್ರ ಸ್ಪಷ್ಟಪಡಿಸಿದ್ದಾರೆ.