ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ಅಂತ್ಯವಾಗಿದ್ದು, ಇಡಿ ದಾಳಿ ಕುರಿತಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನನ್ನ ಮನೆ ವಿಚಾರವಾಗಿ ಯಾರೋ ದೂರು ಕೊಟ್ಟಿದ್ದಾರಂತೆ ಹೀಗಾಗಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾನು ನೀಡಿದ ದಾಖಲೆಗಳು ಸರಿಯಿದ್ದ ಕಾರಣ ನನ್ನ ಮನೆಯಿಂದ ಇಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ. ನಾವು ಟ್ರಾವೆಲ್ ಏಜೆನ್ಸಿಯನ್ನು ನಡೆಸುತ್ತೇವೆ. ಇಡಿ ಅಧಿಕಾರಿಗಳು ಅದರ ಮೇಲೂ ದಾಳಿ ನಡೆಸಿದ್ದಾರೆ. ಅಲ್ಲೂ ಅವರಿಗೆ ಏನೂ ಸಿಕ್ಕಿಲ್ಲ.
ನಿನ್ನೆ ಬೆಳಗ್ಗೆ 7.30 ಕ್ಕೆ ನನ್ನ ಮನೆ ವಿಚಾರಕ್ಕೆ ಇಡಿ ದಾಳಿ ನಡೆಸಿದ್ರು. ನನ್ನ ಮನೆ , ನನ್ನ ಸಹೋದರನ ಮನೆಯಲ್ಲಿ ಪರಿಸೀಲನೆ ಮನೆಗೆ ಜಾಗ ಖರೀದಿಸುವಾಗ, ಮನೆ ನಿರ್ಮಾಣಕ್ಕೆ ಎಷ್ಟು ಖರ್ಚಾಗಿದೆ ಈ ಬ್ಗೆ ಪರಿಶೀಲನೆ ಮಾಡಿದ್ದಾರೆ. ಇಡಿ ಅಧಿಕಾಗಳಿಗೆ ಈ ಬಗ್ಗೆ ಎಲ್ಲಾ ಮಾಹಿತಿ ಕೊಟ್ಟಿದ್ದೇನೆ. ಇಡಿಯವರು ಬ್ಯಾಂಕ್ ನಿಂದ ಮಾಹಿತಿ ಪಡಿದ್ದಾರೆ ನನಗೆ ಯಾವುದೇ ನೋಟಿಸ್ ಕೊಟ್ಟಿ. ವಿಚಾರಣೆಗೆ ಕರೆದಾಗ ಬರಬೇಕು ಎಂದು ಹೇಳಿದ್ದಾರೆ ಎಂದರು.
ಇನ್ನು ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಇಡಿ ದಾಳಿ ಮಾಡಲಾಗಿದೆ. ಇಡಿ ದಾಳಿ ರಾಜಕೀಯ ಪ್ರೇರಿತ, ಇಡಿ ದಾಳಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ರಾಜಕೀಯದಲ್ಲಿ ವಿರೋಧಿಗಳು ಇರುವುದು ನಿಜ. ಹೀಗಾಗಿ ಬಿಜೆಪಿ ಸರ್ಕಾರದಿಂದ ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.
ಗುರುವಾರ ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ರೋಷನ್ ಬೇಗ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ದಾಳಿ ಅಂತ್ಯವಾಗಿದ್ದು, ಈ ಬಗ್ಗೆ ರೋಷನ್ ಬೇಗ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಅಧಿಕಾರಿಗಲ ದಾಳಿ ಮುಕ್ತಯವಾಗಿದ್ದು, ಅಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಅಕ್ರಮ ಹಣ ವರ್ಗಾವಣೆ ಬಗ್ಗೆ ಇಡಿ ಅಧಿಕಾರಿಗಳು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ್ದೇನೆ ಎಂದರು.